ಕೆಂಪು ಕಲ್ಲು ಮರಳು ಸಮಸ್ಯೆ: ಪರಿಹರಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಕೆ.

 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳಿನ ಸಮಸ್ಯೆಯು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದ್ದು, ಈ ಸಂಬಂಧ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಕೆಂಪುಕಲ್ಲು ಮತ್ತು ಮರಳು ಸಮಸ್ಯೆಗೆ ಆದಷ್ಟು ಬೇಗ ಅಂತ್ಯ ಹಾಡುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು, ಶಾಸಕ ಮಿತ್ರರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು
ಪದಾಧಿಕಾರಿಗಳೊಂದಿಗೆ ಮುಖ್ಯ ಮಂತ್ರಿಗಳನ್ನು ಭೇಟಿಯಾಗಿ ಮನವಿ ಮಾಡಿದರು.
ಸಿ ಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಕರಾವಳಿ ಭಾಗದ ಜನರ ಈ ಸಮಸ್ಯೆಗೆ ಪರಿಹಾರ ಒದಗಿಸುವರೇ ಎಂದು ಕಾದು ನೋಡಬೇಕಿದೆ.

Share this article!

Leave A Comment