ದರ್ಶನ್ ಸೇರಿದಂತೆ ಏಳು ಆರೋಪಿಗಳ ಜಾಮೀನು ರದ್ದು – ಸುಪ್ರೀಂ ಕೋರ್ಟ್‌ನ ತೀರ್ಪು

ಹೊಸದಿಲ್ಲಿ: ನಟ ದರ್ಶನ್ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಏಳು ಆರೋಪಿಗಳ ಜಾಮೀನು ರದ್ದುಗೊಂಡಿದೆ. ಗುರುವಾರ (ಆ.14) ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಆರೋಪಿಗಳ ಜಾಮೀನನ್ನು ರದ್ದುಮಾಡುವಂತೆ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಮಹದೇವನ್ ಅವರ ವಿಭಾಗೀಯ ಪೀಠ ಈ ತೀರ್ಪು ಪ್ರಕಟಿಸಿದ್ದು, ದರ್ಶನ್ ಆ್ಯಂಡ್ ಗ್ಯಾಂಗ್ ವಿರುದ್ಧ ದಾಖಲಾದ ಜಾಮೀನು ಅರ್ಜಿ ವಿಚಾರಣೆ ನಡೆಸಿ ತೀರ್ಪು ನೀಡಲಾಗಿದೆ.

2024ರ ಜೂನ್ 9ರಂದು ಬೆಂಗಳೂರಿನ ಪಟ್ಟಣಗೆರೆಯ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳಾಗಿ ಬಂಧನಕ್ಕೊಳಗಾಗಿದ್ದರು.

ಈ ಪ್ರಕರಣದಲ್ಲಿ ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್ ಕೆಲವು ಆರೋಪಿಗಳಿಗೆ ಜಾಮೀನು ನೀಡಿತ್ತು. ಆದರೆ, ಬೆಂಗಳೂರಿನ ನಗರ ಪೊಲೀಸರು ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ತೀವ್ರ ಚರ್ಚೆಯ ಬಳಿಕ ಇಂದು ಸುಪ್ರೀಂ ಕೋರ್ಟ್ ಆರೋಪಿಗಳ ಜಾಮೀನನ್ನು ರದ್ದುಮಾಡುವ ತೀರ್ಪು ನೀಡಿದೆ.

ಇದರಿಂದಾಗಿ, ಪ್ರಕರಣ ಮತ್ತಷ್ಟು ತೀವ್ರತೆ ಪಡೆದುಕೊಂಡಿದೆ.

Share this article!

Leave A Comment