Vice President Election 2025 Results: ಭಾರಿ ಬಹುಮತದೊಂದಿಗೆ ಎನ್ಡಿಎ ಅಭ್ಯರ್ಥಿ ಗೆಲವು, ರಾಧಾಕೃಷ್ಣನ್ ಈಗ ನೂತನ ಉಪರಾಷ್ಟ್ರಪತಿ.

Vice President Election 2025:ಭಾರತದ 15ನೇ ಉಪ ರಾಷ್ಟ್ರಪತಿಯಾಗಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ. ರಾಧಾಕೃಷ್ಣನ್ ಅವರು 452 ಮತಗಳ ಪಡೆದು ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿರುವ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರು ಘೋಷಣೆ ಮಾಡಿದರು.

ನವದೆಹಲಿ: ಭಾರತದ 15ನೇ ಉಪ ರಾಷ್ಟ್ರಪತಿಯಾಗಿ (15th Vice President of India) ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ (CP Radhakrishnan) ಅವರು ಆಯ್ಕೆಯಾಗಿದ್ದಾರೆ. ರಾಧಾಕೃಷ್ಣನ್ ಅವರು 452 ಮತಗಳ ಪಡೆದು ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಯಾಗಿರುವ ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ಅವರು ಘೋಷಣೆ ಮಾಡಿದರು. ಮತ್ತೊಂದೆಡೆ ವಿರೋಧ ಪಕ್ಷಗಳ ಮೈತ್ರಿಕೂಟವು ಸುಪ್ರೀಂ ಕೋರ್ಟ್ನ ಮಾಜಿ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರು 300 ಮತ ಪಡೆದಿದ್ದಾರೆ.

ಎನ್ಡಿಎ ಅಭ್ಯರ್ಥಿ ರಾಧಾಕೃಷ್ಣನ್ ಗೆಲವು

ಜಗದೀಪ್ ಧಂಖರ್ ಅವರ ಹಠಾತ್ ರಾಜೀನಾಮೆಯಿಂದಾಗಿ ಅನಿವಾರ್ಯವಾದ ಚುನಾವಣೆಯಲ್ಲಿ ಸಿ.ಪಿ. ರಾಧಾಕೃಷ್ಣನ್ ಅವರು ಸುದರ್ಶನ್ ರೆಡ್ಡಿ (B Sudarshan Reddy) ಅವರನ್ನು 152 ಮತಗಳಿಂದ ಸೋಲಿಸಿದರು. ಮುಂದುವರೆದು, ರಾಧಾಕೃಷ್ಣನ್ ಅವರು ಸೆಪ್ಟೆಂಬರ್ 12 ರಂದು ಭಾರತದ ಹದಿನೈದನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಇದರೊಂದಿಗೆ ಅವರು ರಾಜ್ಯಸಭಾ ಅಧ್ಯಕ್ಷ ಹುದ್ದೆಯ ಜವಾಬ್ದಾರಿಯನ್ನು ಸಹ ವಹಿಸಿಕೊಳ್ಳಲಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಜೋಶಿ ಮನೆಯಲ್ಲಿ ಬಿಜೆಪಿ ಸಂಭ್ರಮಾಚರಣೆ

ಮೂಲಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಹೊತ್ತಿನಲ್ಲಿ ಪ್ರಹ್ಲಾದ್ ಜೋಶಿ ಅವರ ನಿವಾಸಕ್ಕೆ ತಲುಪಲಿದ್ದಾರೆ. ಭವಿಷ್ಯದ ಉಪಾಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಅವರನ್ನು ಅಭಿನಂದಿಸಲು ಎಲ್ಲಾ ಸಂಸದರು ಪ್ರಹ್ಲಾದ್ ಜೋಶಿ ಅವರ ಮನೆಗೆ ತಲುಪಲಿದ್ದಾರೆ.

ಭಾರತದ ನೂತನ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 767 ಮತಗಳು ಚಲಾವಣೆಯಾದವು. ಆದ್ರಲ್ಲಿ ಎನ್‌ಡಿಎ ಅಭ್ಯರ್ಥಿ 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದರು. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದರು. ಆದಾಗ್ಯೂ, ಚಲಾವಣೆಯಾದ 15 ಮತಗಳು ಅಮಾನ್ಯವಾಗಿವೆ ಎಂದು ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ. ಮೋದಿ ತಿಳಿಸಿದರು. ಮತ್ತೊಂದೆಡೆ ಬಿಆರ್‌ಎಸ್, ಬಿಜು ಜನತಾದಳ (ಬಿಜೆಡಿ) ಮತ್ತು ಅಕಾಲಿ ದಳ ಪಕ್ಷಗಳ ಸಂಸದರು ಈ ಚುನಾವಣೆಯಿಂದ ದೂರ ಉಳಿದಿದ್ದಾರೆ.

ಇನ್ನು ಸಿ.ಪಿ. ರಾಧಾಕೃಷ್ಣನ್ ಪ್ರಸ್ತುತ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಈ ಹಿಂದೆ ಜಾರ್ಖಂಡ್ ಮತ್ತು ತೆಲಂಗಾಣದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ದಕ್ಷಿಣ ಭಾರತದಿಂದ ಬಿಜೆಪಿಯ ಪ್ರಬಲ ಪ್ರತಿನಿಧಿಯಾಗಿ ಹೊರಹೊಮ್ಮಿರುವ ರಾಧಾಕೃಷ್ಣನ್, ಬಹಳ ಹಿಂದಿನಿಂದಲೂ ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿದ್ದಾರೆ. ಇದರೊಂದಿಗೆ ಈ ಹಿಂದೆ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ರಾಧಾಕೃಷ್ಣನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಪ್ತಮಿತ್ರ ಎಂದು ಪರಿಗಣಿಸಲಾಗಿದೆ.

 

Share this article!

Leave A Comment