Lokayukta raid ಪುತ್ತೂರು: ಲೋಕಾಯುಕ್ತ ದಾಳಿ ಬಳಿಕ ನಾಪತ್ತೆಯಾಗಿದ್ದ ತಹಸಿಲ್ದಾರ್ ಎಸ್.ಬಿ.ಕೂಡಲಗಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ.

ಪುತ್ತೂರು: ಪುತ್ತೂರು ತಾಲೂಕು ಕಚೇರಿಯ ಭೂಮಿ ಶಾಖೆಯ ಕೇಸ್ ವರ್ಕರ್ ಸುನೀಲ್ ಎಂಬಾತ ಅಕ್ರಮ ಸಕ್ರಮದಲ್ಲಿ ಮಂಜೂರಾದ ಜಮೀನು ಪರಭಾರೆಗೆ ನಿರಾಕ್ಷೇಪಣಾ ಪತ್ರ ನೀಡಲು ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಸೇರಿದ ಬಳಿಕ ತಲೆ ಮರೆಸಿಕೊಂಡಿರುವ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಅವರು ತಮ್ಮ ಮೇಲೂ ಕೇಸ್ ದಾಖಲಾಗಿರುವ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಂಗಳೂರು – ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ತಹಶೀಲ್ದಾರ್ ಎಸ್.ಬಿ.ಕೂಡಲಗಿ ಅವರು ತನ್ನ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸು ದಾಖಲಿಸಿಕೊಂಡ ನಂತರ ಹಲವು ದಿನಗಳಿಂದ ಕಚೇರಿಗೆ ಹಾಜರಾಗದೇ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತರ ಕಚೇರಿಯ ವ್ಯವಸ್ಥಾಪಕರಾಗಿರುವ ಗಿರುವ ಗ್ರೇಡ್ 2 ತಹಶೀಲ್ದಾರ್ ನಾಗರಾಜ್ ರವರಿಗೆ ತಹಶೀಲ್ದಾರ್ ಪ್ರಭಾರ ನೀಡಿ ದ.ಕ. ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ.ಆದೇಶಿಸಿದ್ದಾರೆ.

ಮೇ 31ರಂದು ತಹಶೀಲ್ದಾರ್ ಆಗಿದ್ದ ಪುರಂದರ ಹೆಗ್ಡೆಯವರು ವಯೋನಿವೃತ್ತಿ ಹೊಂದಿದ ಬಳಿಕ ಸಹಾಯಕ ಆಯುಕ್ತರ ಕಚೇರಿಯಲ್ಲಿ ವ್ಯವಸ್ಥಾಪಕರಾಗಿದ್ದ ಗ್ರೇಡ್ -2 ತಹಶೀಲ್ದಾರ್ ನಾಗರಾಜ್ ಅವರನ್ನು ಪ್ರಭಾರ ತಹಸಿಲ್ದಾರ್ ಆಗಿ ನಿಯುಕ್ತಿಗೊಳಿಸಲಾಗಿತ್ತು. ಆ ಬಳಿಕ ಬಾಗಲಕೋಟೆ ಇಳಕಲ್ ಗ್ರೇಡ್-1 ತಹಸೀಲ್ದಾರ್ ಆಗಿದ್ದ

ವಿಜಯಪುರ ಮೂಲದ ಎಸ್.ಬಿ.ಕೂಡಲಗಿ ಅವರು ಪುತ್ತೂರಿಗೆ ವರ್ಗಾವಣೆಗೊಂಡು ಆಗಮಿಸಿ ಜೂ.26ರಂದು ಕರ್ತವ್ಯಕ್ಕೆ ಹಾಜರಾಗಿದ್ದರು

.ಆ.28ರಂದು ಸಂಜೆ ಲೋಕಾಯುಕ್ತ ಪೊಲೀಸರು

ತಾಲೂಕು ಕಚೇರಿಯ ಭೂಮಿ ಶಾಖೆಗೆ ದಾಳಿ ನಡೆಸಿ ಅಕ್ರಮ ಸಕ್ರಮದಲ್ಲಿ ಮಂಜೂರಾದ ಜಮೀನು ಪರಭಾರೆಗೆ ನಿರಾಕ್ಷೇಪಣಾ ಪತ್ರ ನೀಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಆರೋಪದ ದೂರು ದಾಖಲಿಸಿಕೊಂಡಿದ್ದರಲ್ಲದೆ ಕೇಸ್ ವರ್ಕರ್ ಸುನಿಲ್ ಎಂಬವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು.

Share this article!

Leave A Comment