Vitla : ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ದೆಹಲಿ ಸ್ವಾತಂತ್ರೋತ್ಸವಕ್ಕೆ ವಿಶೇಷ ಅತಿಥಿಯಾಗಿದ್ದ ಸ್ವಚ್ಚ ವಾಹಿನಿ ಸಾರಥಿ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾ ! ಬಿಲ್ ಕಲೆಕ್ಟರ್ ಕೂಡಾ ಅರೆಸ್ಟ್!

ಮಂಗಳೂರು: (ಸೆಪ್ಟೆಂಬರ್ 06): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಪಂಚಾಯತ್ನಲ್ಲಿ ಭ್ರಷ್ಟಾಚಾರದ ಕರಾಳ ಮುಖ ಬಯಲಾಗಿದೆ. ಕೊಳವೆ ಬಾವಿ ಮಂಜೂರಾತಿಗಾಗಿ

ಬರೋಬ್ಬರಿ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು, ಅದನ್ನು ಸ್ವೀಕರಿಸುವಾಗಲೇ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫೀಸಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರ ಸೂಚನೆ ಮೇರೆಗೆ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ವಿಲಿಯಂ ಕೂಡಾ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದಾರೆ.

ಪೆರುವಾಯಿ ಗ್ರಾಮದ 75 ವರ್ಷ ವಯಸ್ಸಿನ ವೃದ್ಧರೊಬ್ಬರಿಗೆ ಸರ್ಕಾರದ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ

ಉಪಯೋಜನೆಯಡಿಯಲ್ಲಿ ಕೊಳವೆ ಬಾವಿ

ಮಂಜೂರು ಮಾಡಿಸಲು ಅವರ ಅಳಿಯ 2024

ರಿಂದಲೂ ಪ್ರಯತ್ನಿಸುತ್ತಿದ್ದರು. 2024ರಲ್ಲಿ ಪಂಚಾಯತ್ ಲಿಸ್ಟೈಲ್ಲಿ ಹೆಸರು ಸೇರಿಸದ ಕಾರಣ, 2025ರ ಮೇ ತಿಂಗಳಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದರು. ಹಲವು ಬಾರಿ ಕಚೇರಿಗೆ ಅಲೆದಾಡಿದರೂ

ಯಾವುದೇ ಪ್ರಯೋಜನವಾಗಿರಲಿಲ್ಲ.

ಸೆಪ್ಟೆಂಬರ್ 2, 2025 ರಂದು ದೂರುದಾರರು (ಅಳಿಯ) ಪಂಚಾಯತ್ ಅಧ್ಯಕ್ಷೆ ನಫೀಸಾರನ್ನು ಭೇಟಿಯಾಗಿ ವಿಚಾರಿಸಿದಾಗ, “ಬೆಂಗಳೂರು ಆಫೀಸೆ ಹತ್ತು ಸಾವಿರ ಕೊಡಬೇಕು. ಹಣ ಕೊಟ್ಟರೆ ಮಾತ್ರ ನಿಮ್ಮ ಕೆಲಸ ಆಗುತ್ತದೆ. ನಾನು ಬೆಂಗಳೂರಿಗೆ ಹೋಗಿ ಕೆಲಸ ಮಾಡಿಸಿಕೊಡುತ್ತೇನೆ, ಹಣ ತಗೊಂಡು ಬನ್ನಿ” ಎಂದು ನೇರವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ತಮ್ಮ ಬಳಿ ಅಷ್ಟು ಹಣವಿಲ್ಲ ಎಂದು ಹೇಳಿ ವಾಪಸ್ ಬಂದಿದ್ದ ಅಳಿಯ, ಸೆಪ್ಟೆಂಬರ್ 4 ರಂದು ಮತ್ತೆ ಅಧ್ಯಕ್ಷರನ್ನು ಭೇಟಿಯಾದಾಗಲೂ ನಫೀಸಾ ಅವರು 10,000/- ರೂ. ಲಂಚವಿಲ್ಲದೆ ಕೆಲಸ ಮಾಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಲೋಕಾಯುಕ್ತಕ್ಕೆ ದೂರು, ಬಲೆಗೆ ಬಿದ್ದ ಭ್ರಷ್ಟರು!

ಅಧ್ಯಕ್ಷೆ ನಫೀಸಾ ಅವರ ಲಂಚದ ಬೇಡಿಕೆಯಿಂದ ಬೇಸತ್ತ ಪಿರ್ಯಾದಿದಾರರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆಗೆ ಸಜ್ಜಾಗಿದ್ದರು. ಇಂದು, ಸೆಪ್ಟೆಂಬರ್ 6, 2025 ರಂದು, ಪಿರ್ಯಾದಿದಾರರಿಂದ 10,000/- ರೂ. ಲಂಚದ ಹಣವನ್ನು ಸ್ವೀಕರಿಸಲು ಅಧ್ಯಕ್ಷೆ ನಫೀಸಾ ಅವರು ಬಿಲ್ ಕಲೆಕ್ಟರ್ ವಿಲಿಯಂ ಅವರಿಗೆ ಸೂಚನೆ ನೀಡಿದ್ದರು.

ಅದರಂತೆ, ವಿಲಿಯಂ ಅವರು ಲಂಚದ ಹಣವನ್ನು ಸ್ವೀಕರಿಸುತ್ತಿದ್ದಂತೆಯೇ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಇಬ್ಬರನ್ನೂ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಸದ್ಯ, ನಫೀಸಾ ಮತ್ತು ವಿಲಿಯಂ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನಷ್ಟು ಯಾರ್ಯಾರು ಶಾಮೀಲಾಗಿದ್ದಾರೆ ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಯುತ್ತಿದೆ.

ಯಾರು ಈ ನಫೀಸಾ ?

ನಫೀಸಾ ರವರು 2024ರಲ್ಲಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ರಾಜ್ಯದ ಪ್ರತಿ

ಗ್ರಾ.ಪಂ.ವ್ಯಾಪ್ತಿಯಲ್ಲೂ ಸ್ವಚ್ಛ ಸಂಕೀರ್ಣವನ್ನು ನಿರ್ಮಿಸಿ ವಾಹನದ ಮೂಲಕ ತ್ಯಾಜ್ಯ ಸಂಗ್ರಹಣಾ ಕಾರ್ಯ ಕಡ್ಡಾಯಗೊಳಿಸಲಾಗಿದ್ದು ಪೆರುವಾಯಿಯಲ್ಲಿ ಸ್ವತಃ ವಾಹನ ಚಲಾಯಿಸುವ ಮೂಲಕ ನಫೀಸಾ ಗಮನ ಸೆಳೆದಿದ್ದರು. ಈ ಮೂಲಕ ಅವರು ಸ್ವಚ್ಚ ವಾಹಿನಿ ಸಾರಥಿ ಎಂದು

 

ಕಾರ್ಯಾಚರಣೆಯಲ್ಲಿ ಪಾಲ್ಗೊಂಡವರು:

ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು (ಪ್ರಭಾರ) ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್. ಮತ್ತು ರವಿ ಪವಾರ್ ಹಾಗೂ ಮಂಗಳೂರು ಲೋಕಾಯುಕ್ತ

ಸಿಬ್ಬಂದಿಗಳು ಈ ಯಶಸ್ವಿ ಟ್ರ್ಯಾಪ್ ಕಾರ್ಯಾಚರಣೆ ನಡೆಸಿದ್ದಾರೆ.

Share this article!

Leave A Comment