ಮನೆಗೆ ಅಕ್ರಮ ಪ್ರವೇಶ ಆರೋಪ : ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು.

ಆರೋಪಿಯ ಅಮಾನತು. ಕಡಬ, ಡಿ.4: ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದ ಕಡಬ ಠಾಣಾ ಹೆಡ್‌ಕಾನ್‌ಸ್ಟೇಬಲ್‌ನನ್ನು ಊರವರು ಹಿಡಿದಿದ್ದು, ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯರೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಎಂಬಲ್ಲಿ ಬುಧವಾರ ನಡೆದಿದೆ. ಕಡಬ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ರಾಜು ನಾಯ್ಕ್ ಆರೋಪಿ. ಈತ ತಡರಾತ್ರಿ ಕೊಯಿಲ ನಿವಾಸಿ ಹರೀಶ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಗೈದಿದ್ದು, ಈ ವೇಳೆ ಮನೆ ಮಂದಿ ಹಿಡಿದಿದ್ದಾರೆ ಎನ್ನಲಾಗಿದೆ. . ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಚೇತನ್ ಎಂಬವರಿಗೆ ಹಲ್ಲೆಗೈದಿದ್ದಾರೆ. ಈ ಬಗ್ಗೆ …

Continue Reading

ರೆಪೋ ದರ ಇಳಿಕೆ ಮಾಡಿದ ಆರ್‌ಬಿಐ : ಗೃಹ, ವಾಹನ ಸಾಲಗಾರರಿಗೆ ಶುಭಸುದ್ದಿ!

ಮುಂಬೈ: ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಆರು ತ್ರೈಮಾಸಿಕಗಳ ಗರಿಷ್ಠ ಮಟ್ಟವಾದ ಶೇ.8.2ಕ್ಕೆ ಏರಿಕೆಯಾಗಿದೆ. ಆರ್ಥಿಕ ಬೆಳವಣಿಗೆಯನ್ನು ಮತ್ತಷ್ಟು ಹೆಚ್ಚಿಸುವ ಪ್ರಯತ್ನವಾಗಿ ಆರ್‌ಬಿಐ ಶುಕ್ರವಾರ ರೆಪೋ ದರದಲ್ಲಿ 25 ಮೂಲಾಂಶವನ್ನು ಕಡಿತಗೊಳಿಸಿದೆ. ಇದರಿಂದ ರೆಪೋ ದರ ಶೇ. 5.50ರಿಂದ ಶೇ 5.25ಕ್ಕೆ ಇಳಿಕೆಯಾಗಿದೆ. ಈ ಬೆಳವಣಿಗೆಯಿಂದ ಗೃಹ ಸಾಲ, ಹಾಗೂ ವಾಣಿಜ್ಯ ಸಾಲಗಳು ಇನ್ನಷ್ಟು ಅಗ್ಗವಾಗಲಿವೆ ಎಂದು ನಿರೀಕ್ಷಿಸಲಾಗಿದೆ. ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಪ್ರಸಕ್ತ ಹಣಕಾಸು ವರ್ಷದ ಐದನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಘೋಷಿಸಿದ್ದಾರೆ. ಹಣಕಾಸು ನೀತಿ ಸಮಿತಿ (MPC) …

Continue Reading

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ 59, ಮರಳುಗಾರಿಕೆಗೆ 42 ಪರವಾನಿಗೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಬಹುತೇಕ ಪರಿಹಾರಗೊಂಡಿದೆ. ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59 ಪರವಾನಿಗೆ ನೀಡಲಾಗಿದೆ. 42 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಸಲು ಮಾರ್ಚ್ ಒಳಗೆ ಪರವಾನಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಈಗಾಗಲೇ 19 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಯುತ್ತಿದೆ. ಇನ್ನೂ 42 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಇದರಿಂದಾಗಿ ಮುಂದಿನ ಐದು ವರ್ಷ ಮರಳುಗಾರಿಕೆಗೆ ಸಮಸ್ಯೆಯಾಗುವ ಸಾಧ್ಯತೆ ಇಲ್ಲ ಎಂದು ಹೇಳಿದರು. ಜಿಲ್ಲೆಯಲ್ಲಿ …

Continue Reading

ಸಯ್ಯಿದ್ ಕೂರತ್ ತಂಙಳ್ ಸ್ಮರಣಾರ್ಥ ಆಂಬುಲೆನ್ಸ್ ಲೋಕಾರ್ಪಣೆ*

*ಸಯ್ಯಿದ್ ಕೂರತ್ ತಂಙಳ್ ಸ್ಮರಣಾರ್ಥ ಆಂಬುಲೆನ್ಸ್ ಲೋಕಾರ್ಪಣೆ* ಮಂಗಳೂರು; ತಾಜುಲ್ ಉಲಮಾ ಹೆಲ್ಪ್ ವಿಂಗ್ ಖುರ್ರತುಸ್ಸಾದಾತ್ ಮೆಮೋರಿಯಲ್ ಫೌಂಡೇಶನ್ (ರಿ) ಇದರ ವತಿಯಿಂದ ಎರಡನೇ ಆ್ಯಂಬುಲೆನ್ಸನ್ನು ಖುರ್ರತುಸ್ಸಾದಾತ್ ಸಯ್ಯಿದ್ ಪಝಲ್ ಕೋಯಮ್ಮ ತಂಙಳ್ ಕೂರತ್ ರವರ ಸ್ಮರಣಾರ್ಥವಾಗಿ ಕರ್ನಾಟಕ ರಾಜ್ಯ ವಿಧಾನಸಭಾಧ್ಯಕ್ಷ ಹಾಜಿ UT ಖಾದರ್ ಫರೀದ್ ರವರು ಲೋಕಾರ್ಪಣೆಗೈದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಯ್ಯಿದ್ ಅಬ್ದುರ್ರಹ್ಮಾನ್ ಮಸ್ಊದ್ ಅಲ್ ಬುಖಾರಿ ಕೂರತ್ ಹಿತೋಪದೇಶ ನೀಡಿದರು. ಸಭೆಯಲ್ಲಿ ಮಾತನಾಡಿದ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ T.M.ಮುಹಿಯ್ಯದ್ದೀನ್ ಸಖಾಫಿ ತೋಕೆಯವರು ತಾಜುಲ್ ಉಲಮಾ …

Continue Reading

ಧರ್ಮಸ್ಥಳ ಕೇಸ್: ತಿಮರೋಡಿ, ಗಿರೀಶ್ ಮಟ್ಟಣನವರ್ ತಂಡಕ್ಕೆ ಹೈಕೋರ್ಟ್ ಶಾಕ್; SIT ತನಿಖೆಗೆ ಅನುಮತಿ!

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರಾದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ವಿಠಲಗೌಡ ತಮ್ಮ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರಾದ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ವಿಠಲಗೌಡ ತಮ್ಮ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ 39/2025 ತನಿಖೆಗೆ ಅಕ್ಟೋಬರ್ 30ರಂದು ನೀಡಿದ್ದ ತಡೆಯಾಜ್ಞೆಯನ್ನ ಹೈಕೋರ್ಟ್ ತೆರವುಗೊಳಿಸಿದ್ದು SIT ತನಿಖೆಗೆ ಅನುಮತಿ ನೀಡಿದೆ. ಹೀಗಾಗಿ ಬುರುಡೆ ಗ್ಯಾಂಗ್ ಗೆ ಮತ್ತೆ ಸಂಕಷ್ಟ …

Continue Reading

ಹೈಕೋರ್ಟ್‌ನ ಧಾರವಾಡ ಪೀಠಕ್ಕೆ ಯೂಟ್ಯೂಬರ್‌ ಸಮೀರ್‌ ಎಂಡಿ ಕೇಸ್‌, ಏನಿದು ಪ್ರಕರಣ?

ಯೂಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಧಾರವಾಡಕ್ಕೆ ವರ್ಗಾಯಿಸಿದೆ. ಧರ್ಮಸ್ಥಳದ ಸೌಜನ್ಯ ಪ್ರಕರಣದ ಬಗ್ಗೆ ಸಮೀರ್ ವಿಡಿಯೋ ಮಾಡಿದ್ದರು. ಈ ಸಂಬಂಧ ಬಳ್ಳಾರಿ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದರು. ಈ ವರ್ಗಾವಣೆಯಿಂದ ಅರ್ಜಿದಾರರು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಇನ್ನೊಂದೆಡೆ ಗಿರೀಶ್ ಮಟ್ಟಣ್ಣನವರ್ ವಿರುದ್ಧ ತನಿಖೆ ನಡೆಸುವಂತೆ ಮಹಿಳಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.   ಹೈಲೈಟ್ಸ್‌: ಯೂಟ್ಯೂಬರ್ ಎಂ.ಡಿ. ಸಮೀರ್ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ …

Continue Reading

ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್ ಪ್ರಕರಣಗಳು: ತೆಲಂಗಾಣದಲ್ಲಿ ಎಸ್‌ಐಟಿಯಿಂದ ನಟ ವಿಜಯ್ ದೇವರಕೊಂಡ ವಿಚಾರಣೆ .

ಯುವಕರು ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಹಣ ಗಳಿಸುವ ಆಮಿಷವೊಡ್ಡುವ ಮೂಲಕ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್‌ಗಳು ಮತ್ತು ಪ್ರವರ್ತಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ಹೈದರಾಬಾದ್: ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳನ್ನು ಉತ್ತೇಜಿಸುವ ಪ್ರಕರಣಗಳಿಗೆ ಸಂಬಂಧಿಸಿದಂತೆ ನಟ ವಿಜಯ್ ದೇವರಕೊಂಡ ಮಂಗಳವಾರ ತೆಲಂಗಾಣ ಸರ್ಕಾರದ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

Continue Reading

ದೆಹಲಿ ಸ್ಫೋಟ | ತನಿಖೆಯನ್ನು NIA ವಹಿಸಿಕೊಂಡಿದೆ; 12 ಜನರ ಸಾವಿಗೆ ಕಾರಣವಾದ ‘ಭಯಾನಕ ಘಟನೆ’ಯ ಹಿಂದಿನ ಪಿತೂರಿಗಾರರನ್ನು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಪ್ರತಿಜ್ಞೆ ಮಾಡಿದ್ದಾರೆ.

ದೇಶದ ಪ್ರಮುಖ ತನಿಖಾ ಸಂಸ್ಥೆಗಳು ಘಟನೆಯ ಬಗ್ಗೆ ತ್ವರಿತ ಮತ್ತು ಸಮಗ್ರ ತನಿಖೆ ನಡೆಸುತ್ತಿದ್ದು, ತನಿಖೆಯ ಫಲಿತಾಂಶಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.   ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ “ಭಯಾನಕ ಘಟನೆ”ಯ ಹಿಂದಿನ ಪಿತೂರಿಗಾರರನ್ನು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರತಿಜ್ಞೆ ಮಾಡಿದ್ದಾರೆ. ಕಾರಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸುಮಾರು ಒಂದು ಡಜನ್ ಜನರು ಸಾವನ್ನಪ್ಪಿದರು. ಕೆಂಪು ಕೋಟೆ ಬಳಿ ನಡೆದ ಘಟನೆಯ ತನಿಖೆಯನ್ನು ಸರ್ಕಾರ …ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸಿದೆ.

Continue Reading

Delhi blast ಆತ್ಮಾಹುತಿ ದಾಳಿಯಲ್ಲ; ಭಯದಿಂದ, ಆತುರದಲ್ಲಿ ಸ್ಫೋಟ ಸಂಭವಿಸಿದೆ’

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆ ಬಳಿ ಸೋಮವಾರ ಸಂಜೆ ನಡೆದ ಭಯೋತ್ಪಾದಕ ದಾಳಿಯ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಪ್ರಾಥಮಿಕ ತನಿಖೆಯಲ್ಲಿ ಕಾರು ಸ್ಫೋಟವು ಆತ್ಮಹುತಿ ಬಾಂಬ್ ಸ್ಫೋಟವಲ್ಲ. ಬದಲಿಗೆ ಶಂಕಿತ ಭಯಭೀತನಾಗಿ ಆತುರದಲ್ಲಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಸೂಚಿಸುತ್ತದೆ. ಭದ್ರತಾ ಸಂಸ್ಥೆಗಳು ಭಯೋತ್ಪಾದಕ ಜಾಲಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಫರಿದಾಬಾದ್, ಸಹರಾನ್‌ಪುರ, ಪುಲ್ವಾಮಾ ಮತ್ತು ಇತರ ಪ್ರದೇಶಗಳಲ್ಲಿ ಗಮನಾರ್ಹ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ.

Continue Reading