ಮನೆಗೆ ಅಕ್ರಮ ಪ್ರವೇಶ ಆರೋಪ : ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು.

ಆರೋಪಿಯ ಅಮಾನತು. ಕಡಬ, ಡಿ.4: ತಡರಾತ್ರಿ ಮನೆಯೊಂದಕ್ಕೆ ಅಕ್ರಮ ಪ್ರವೇಶಗೈದ ಕಡಬ ಠಾಣಾ ಹೆಡ್‌ಕಾನ್‌ಸ್ಟೇಬಲ್‌ನನ್ನು ಊರವರು ಹಿಡಿದಿದ್ದು, ಈ ವೇಳೆ ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯರೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಎಂಬಲ್ಲಿ ಬುಧವಾರ ನಡೆದಿದೆ. ಕಡಬ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ರಾಜು ನಾಯ್ಕ್ ಆರೋಪಿ. ಈತ ತಡರಾತ್ರಿ ಕೊಯಿಲ ನಿವಾಸಿ ಹರೀಶ್ ಎಂಬವರ ಮನೆಗೆ ಅಕ್ರಮವಾಗಿ ಪ್ರವೇಶಗೈದಿದ್ದು, ಈ ವೇಳೆ ಮನೆ ಮಂದಿ ಹಿಡಿದಿದ್ದಾರೆ ಎನ್ನಲಾಗಿದೆ. . ಸ್ಥಳದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಚೇತನ್ ಎಂಬವರಿಗೆ ಹಲ್ಲೆಗೈದಿದ್ದಾರೆ. ಈ ಬಗ್ಗೆ …

Continue Reading

ರೆಪೋ ದರ ಇಳಿಕೆ ಮಾಡಿದ ಆರ್‌ಬಿಐ : ಗೃಹ, ವಾಹನ ಸಾಲಗಾರರಿಗೆ ಶುಭಸುದ್ದಿ!

ಮುಂಬೈ: ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಆರು ತ್ರೈಮಾಸಿಕಗಳ ಗರಿಷ್ಠ ಮಟ್ಟವಾದ ಶೇ.8.2ಕ್ಕೆ ಏರಿಕೆಯಾಗಿದೆ. ಆರ್ಥಿಕ ಬೆಳವಣಿಗೆಯನ್ನು ಮತ್ತಷ್ಟು ಹೆಚ್ಚಿಸುವ ಪ್ರಯತ್ನವಾಗಿ ಆರ್‌ಬಿಐ ಶುಕ್ರವಾರ ರೆಪೋ ದರದಲ್ಲಿ 25 ಮೂಲಾಂಶವನ್ನು ಕಡಿತಗೊಳಿಸಿದೆ. ಇದರಿಂದ ರೆಪೋ ದರ ಶೇ. 5.50ರಿಂದ ಶೇ 5.25ಕ್ಕೆ ಇಳಿಕೆಯಾಗಿದೆ. ಈ ಬೆಳವಣಿಗೆಯಿಂದ ಗೃಹ ಸಾಲ, ಹಾಗೂ ವಾಣಿಜ್ಯ ಸಾಲಗಳು ಇನ್ನಷ್ಟು ಅಗ್ಗವಾಗಲಿವೆ ಎಂದು ನಿರೀಕ್ಷಿಸಲಾಗಿದೆ. ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಪ್ರಸಕ್ತ ಹಣಕಾಸು ವರ್ಷದ ಐದನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಘೋಷಿಸಿದ್ದಾರೆ. ಹಣಕಾಸು ನೀತಿ ಸಮಿತಿ (MPC) …

Continue Reading

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ 59, ಮರಳುಗಾರಿಕೆಗೆ 42 ಪರವಾನಿಗೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಬಹುತೇಕ ಪರಿಹಾರಗೊಂಡಿದೆ. ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59 ಪರವಾನಿಗೆ ನೀಡಲಾಗಿದೆ. 42 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಸಲು ಮಾರ್ಚ್ ಒಳಗೆ ಪರವಾನಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಈಗಾಗಲೇ 19 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಯುತ್ತಿದೆ. ಇನ್ನೂ 42 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಇದರಿಂದಾಗಿ ಮುಂದಿನ ಐದು ವರ್ಷ ಮರಳುಗಾರಿಕೆಗೆ ಸಮಸ್ಯೆಯಾಗುವ ಸಾಧ್ಯತೆ ಇಲ್ಲ ಎಂದು ಹೇಳಿದರು. ಜಿಲ್ಲೆಯಲ್ಲಿ …

Continue Reading