ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ – ಕತಾರ್‌ನಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಅರೆಸ್ಟ್.

ಮಂಗಳೂರು/ಮಡಿಕೇರಿ: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ.

ಅಬ್ದುಲ್ ರೆಹಮಾನ್ ಬಂಧಿತ ಆರೋಪಿ, ಕತಾರ್‌ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಎನ್‌ಐಎ ಅಧಿಕಾರಿಗಳು ಅಬ್ದುಲ್ ರೆಹಮಾನ್ ನನ್ನ ಬಂಧಿಸಿದ್ದಾರೆ.

ಸದ್ಯ ರೆಹಮಾನನ್ನು ವಶಕ್ಕೆ ಪಡೆದಿರುವ ಎನ್‌ಐಎ ಅಧಿಕಾರಿಗಳು ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮುಂದಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಿದ್ದಾರೆ. ಜೊತೆಗೆ ಉಳಿದ ಆರೋಪಿಗಳಿಗೂ ಎನ್‌ಐಎ ತಂಡ ಬಲೆ ಬೀಸಿದೆ.

Share this article!

Leave A Comment